SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರಕಟವಾಯ್ತು ಫಲಿತಾಂಶದ ದಿನಾಂಕ ?

News

ನಮಸ್ತೆ ಸ್ನೇಹಿತರೆ, ಹತ್ತನೇ ತರಗತಿ ವಿದ್ಯಾರ್ಥಿಗಳು ಕಾಯುತ್ತಿದ್ದ ಆ ದಿನ ಬಂದೆ ಬಿಟ್ಟಿದೆ. ಹೌದು SSLC ಪರೀಕ್ಷೆ ಫಲಿತಾಂಶ ಕುರಿತಂತೆ ಕೆಲ ದಿನಗಳಿಂದ ವದಂತಿಗಳು ಬರುತ್ತಲೇ ಇದ್ದವು. ಈಗ ಆ ವದಂತಿಗಳಿಗೆಲ್ಲಾ ಶಿಕ್ಷಣ ಸಚಿವರಾಗಿರುವ ಸುರೇಶ ಕುಮಾರ್ ಅವರು ತೆರೆ ಎಳೆದಿದ್ದಾರೆ. ಹತ್ತನೇ ತರಗತಿ ಫಲಿತಾಂಶ ಪ್ರಕಟವಾಗುವ ದಿನಾಂಕವನ್ನು ಕೂಡ ತಿಳಿಸಿದ್ದಾರೆ. ಲಾಕ್ ಡೌನ್ ವೇಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದರು.

ಈಗ ಎಲ್ಲದಕ್ಕೂ ವಿರಾಮ ಬಿದ್ದಿದ್ದು ಆಗಸ್ಟ್ ೧೦ ಸೋಮವಾರದಂದು ಮಧ್ಯಾನ್ಹ ಮೂರು ಗಂಟೆಯ ಹೊತ್ತಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಇನ್ನು ಕೊ’ರೋನಾ ಸೋಂಕಿನ ಆತಂಕದ ನಡುವೆಯೂ ರಾಜ್ಯದಲ್ಲಿ 8.5 ಲಕ್ಷ ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆ ಬರೆದಿದ್ದಾರೆ.

ಇನ್ನು ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಸೋಂಕು ಹಾರಾಡುತ್ತಿದ್ದ ಪರಿಣಾಮ ಕಳೆದ ಜೂನ್ ಹಾಗೂ ಜುಲೈ ತಿಂಗಳಿನಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಿ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿತ್ತು. ಇನ್ನು ಈಗಾಗಲೇ ಫಲಿತಾಂಶಕ್ಕಾಗಿ ಹತ್ತನೇ ವಿದ್ಯಾರ್ಥಿಗಳು ಕಾಯುತ್ತಿದ್ದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಅಧಿಕೃತ ವೆಬ್ಸೈಟ್ ಆದ karresults.nic.in ನಲ್ಲಿ ರಿಸಲ್ಟ್ ನ್ನ ಚೆಕ್ ಮಾಡಿಕೊಳ್ಳಬಹುದಾಗಿದೆ.