ಶಾಸಕ ಶರತ್ ಬಚ್ಚೇಗೌಡಗೆ ಕೊರೋನಾ ಪಾಸಿಟಿವ್ ! ಆದ್ರೆ ದೇವೇಗೌಡರನ್ನ ಭೇಟಿಯಾಗಿರುವುದು ?

News
Advertisements

ದಿನದಿಂದ ದಿನಕ್ಕೆ ಮಹಾಮಾರಿಕೊರೋನಾ ಸೋಂಕಿತರ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಾಗುತ್ತಲೇ ಇದೆ. ಸರ್ಕಾರಗಳು ಏನೇ ಕ್ರಮಗಳನ್ನ ಕೈಗೊಂಡರೂ ನಿಯಂತ್ರಣಕ್ಕೆ ಬರುತ್ತಿಲ್ಲ ಕೊರೋನಾ. ಇನ್ನು ಇತ್ತೀಚಿಗೆ ರಾಜಕಾರಣಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಕೊರೋನಾ. ಇತ್ತೀಚೆಗಷ್ಟೇ ವೈದ್ಯಕೀಯ ಸಚಿವರಾಗಿರುವ ಡಾ .ಸುಧಾಕರ್ ಹಾಗೂ ಅವರ ಕುಟುಂಬದವರಿಗೆ ಕೊರೋನಾ ಸೋಂಕು ಪಾಸಿಟಿವ್ ಆಗಿತ್ತು.

ಮತ್ತೆ ಮೊನ್ನೆಯಷ್ಟೇ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆಯಾಗಿರುವ ಸುಮಲತಾ ಅಂಬರೀಷ್ ರವರಿಗೆ ಕೊರೋನಾ ಪಾಸಿಟೀವ್ ಆಗಿದ್ದು ಸ್ವತಃ ಸುಮಲತಾರವರೇ ಇದರ ಬಗ್ಗೆ ತಮ್ಮ ಸಾಮಾಜಿಕ ಜಾಲಾತಾಣ ಖಾತೆಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಈಗ ಹೊಸಕೋಟೆ ಶಾಸಕರಾಗಿರುವ ಶರತ್ ಬಚ್ಚೇಗೌಡರವರಿಗೆ ಕೊರೋನಾ ಪಾಸಿಟಿವ್ ಆಗಿದ್ದು ಖುದ್ದು ಅವರೇ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋವೊಂದನ್ನ ಪೋಸ್ಟ್ ಮಾಡಿದ್ದು ಕೊರೋನಾ ಸೋಂಕಿಗೆ ಒಳಗಾಗಿರುವ ಬಗ್ಗೆ ಹೇಳಿಕೊಂಡಿದ್ದಾರೆ..

‘ಜುಲೈ 6 ಸೋಮವಾರದಂದು ನನಗೆ ಸ್ವಲ್ಪ ಮೈ ಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ನಾನು ಮತ್ತು ನನ್ನ ಧರ್ಮಪತ್ನಿ ಶ್ರೀಮತಿ ಪ್ರತಿಭಾ ಶರತ್ ಒಳಗಾಗಿದ್ದು ಇವತ್ತು ಸಂಜೆ ಇಬ್ಬರಿಗೂ ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ನಿಮಗೆ ಕೊರೋನಾದ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಆದರೂ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀವಿ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ಲ ಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ರೋಗ ನಿರೋಧಕ ಶಕ್ತಿಯು ನಮ್ಮಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇವೆ ಎಂದು ಶಾಸಕ ಶರತ್ ಬಚ್ಚೇಗೌಡ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಆದರೆ ಇದರ ನಡುವೆ ಜುಲೈ 4ರಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಶಾಸಕ ಶರತ್ ಬಚ್ಚೇಗೌಡರು ಭೇಟಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ದೇವೇಗೌಡರು ರಾಜ್ಯ ಸಭಾಸದಸ್ಯರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರ ನಿವಾಸಕ್ಕೆ ಭೇಟಿ ಕೊಟ್ಟಿದ್ದ ಶರತ್ ಬಚ್ಚೇಗೌಡರು ಅವರಿಗೆ ಅಭಿನಂದನೆ ಸಲ್ಲಿಸಿ ಆಶೀರ್ವಾದ ಪಡೆದಿದ್ದರು. ಈಗ ಇದೆ ಆತಂಕಕ್ಕೆ ಕಾರಣವಾಗಿದ್ದು ಮುಂದೇನಾಗುತ್ತೋ ಕಾದು ನೋಡಬೇಕಾಗಿದೆ.