ಆಟೋ ಹುಡುಗನನ್ನ ಹುಡುಕುತ್ತಿದ್ದಾರೆ ಗುಳಿಕೆನ್ನೆಯ ನಟಿ ರಚಿತಾ ರಾಮ್ ! ಯಾರು ಈ ಆಟೋ ಚಾಲಕ ಗೊತ್ತಾ ?

Kannada News - Cinema

ತಮ್ಮ ನೆಚ್ಚಿನ ನಟ ನಟಿಯರನ್ನ ನೋಡಲು ಅಭಿಮಾನಿಗಳು ಅವರ ಮನೆಯ ಮುಂದೆ ಹೋಗು ಕಾಯುವುದು ಸಾಮಾನ್ಯ. ಆದರೆ ಈಗ ಸ್ಯಾಂಡಲ್ವುಡ್ ನ ಗುಳಿಕೆನ್ನೆಯ ಚೆಲುವೆ ರಚಿತಾ ರಾಮ್ ಒಬ್ಬ ಆಟೋ ಹುಡುಗನನ್ನ ಹುಡುಕುತ್ತಿದ್ದಾರೆ.. ನೀವು ನಂಬೋದಿಲ್ಲ ಅಂದ್ರು ಇದೆ ಸತ್ಯ. ಅತೀ ಕಡಿಮೆ ಸಮಯದಲ್ಲಿ ಸ್ಯಾಂಡಲ್ವುಡ್ ನ ಟಾಪ್ ನಟಿಯಾಗಿ ಬೆಳೆದ ರಚಿತಾ ರಾಮ್ ಅವರ ಮನೆಯ ಮುಂದೆ ಕೆಲ ದಿನಗಳ ಹಿಂದಷ್ಟೇ ಆಟೋವೊಂದರಲ್ಲಿ ಮೂವರು ಹುಡುಗರು ಬಂದಿದ್ದಾರೆ.

ಈಗ ಆ ಆಟೋ ಹುಡುಗನನ್ನ ಹುಡುಕುತ್ತಿರುವ ರಚಿತಾ ರಾಮ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ವೊಂದನ್ನ ಹಾಕಿಕೊಂಡಿದ್ದಾರೆ. ಅದೇನೇದರೆ.. ಅಭಿಮಾನಿಗಳೇ ದೇವ್ರ ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ. ಪ್ರತಿದಿನ ಎಷ್ಟೋ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮುಖಾಂತರ ತಮ್ಮ ಅಭಿಮಾನವನ್ನ ವ್ಯಕ್ತ ಪಡಿಸ್ತಾರೆ ತುಂಬಾ ಸಂತೋಷ ಆಗುತ್ತೆ. ಆದ್ರೇ ಇವತ್ ಬೆಳಿಗ್ಗೆ ಅಮ್ಮ ಬಂದು “ರಚ್ಚು ಬೆಳಿಗ್ಬೆಳಿಗ್ಗೆನೇ ಯಾರೋ ಮನೆ ಮುಂದೆ ಕಾಯ್ತಿದಾರೆ ನೋಡು ಅಂದ್ರು”, ನಾನು ಹೊರಗಡೆ ಬಂದು ನೋಡ್ದೇ ಒಂದು ಆಟೋ ಪಕ್ಕ ಮೂರು ಜನ ನಮ್ಮ ಮನೆಯ ಕಡೆ ಮುಖ ಮಾಡಿ ನಿಂತಿದ್ರು..

ನನ್ನ ನೋಡ್ತಿದ್ದ ಹಾಗೆ ತುಂಬಾ ಎಕ್ಸೈಟ್ ಆದ್ರು, ಅವರ ಬಳಿ ಹೋಗ್ತಿದ್ದ ಹಾಗೆ ನನ್ನ ಒಂದು ಮಾತು ಆಡಕ್ಕೂ ಬಿಡ್ದೇ “ಮೇಡಂ ನಾವ್ ನಿಮ್ ದೊಡ್ ಅಭಿಮಾನಿ ಮೇಡಂ ನನ್ ಆಟೋ ಮೇಲ್ 1st ಫೋಟೋ ನಿಮ್ದೇ ಇರ್ಬೇಕು ಮೇಡಂ” ಎಂದು ಗಿಫ್ಟ್ ವ್ರಾಪರ್ ಒಪೆನ್ ಮಾಡ್ಸಿ ನನ್ನ ಫೋಟೋನ ಆಟೋ ಮೇಲೆ ಅಂಟಿಸಿ ನನ್ನ ಆಟೋಗ್ರಾಫ್ ತೆಗೆದುಕೊಂಡು, ಅವರ ನೆಚ್ಚಿನ ಆಟೋ ಜೊತೆ ನನ್ನ ಫೋಟೋ ಕ್ಲಿಕ್ಕಿಸಿ ತಾವೂ ಸೆಲ್ಫಿ ತೆಗೆದುಕೊಂಡು ಹೊರಡಲು ಮುಂದಾದರು.. ನಿಜಕ್ಕೂ ಭಾವುಕನಾದೆ.. ಹೆಸರು ಕೇಳಬೇಕು ಎನ್ನುವಷ್ಟರಲ್ಲಿ ತುಂಬಾ ಉತ್ಸಾಹಿಕನಾಗಿ ನಗುತ್ತಲೇ ಹೊರಟೇ ಬಿಟ್ಟರು. ತಮ್ಮ ಹೆಸರು ಊರು ಯಾವುದೂ ಹೇಳದೆ ಕೇವಲ ತಮ್ಮ ಕಾರ್ಯ ವೈಖರಿ, ನನ್ನ ಮೇಲಿನ ಅಭಿಮಾನವನ್ನ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಸದಾ ಚಿರಋಣಿ.. ನಿಮ್ಮ ಪ್ರೀತಿಯ ಆಟೋ ನಿಮ್ಮ ಜೀವನದ ಪಯಣವನ್ನ ಸುಖಕರವಾಗಿರಿಸಲಿ ಅಂತ ದೇವರಲ್ಲಿ ಬೇಡ್ಕೋತೀನಿ..

ನನ್ನ ಕಲಾಬದುಕಿಗೆ ಜೀವ ಕೊಟ್ಟವರು ಅಭಿಮಾನಿಗಳು..ಅಭಿಮಾನಿಗಳ ಹೃದಯ ಶ್ರೀಮಂತಿಕೆಯ ಮುಂದೆ ಬೇರೆಲ್ಲ ಶೂನ್ಯ ನಿಮ್ಮ ಪ್ರೀತಿ ಅಭಿಮಾನ ಸದಾ ಹೀಗೆ ಇರಲಿ. ಭಾವುಕಳಾದ ಕ್ಷಣದಲ್ಲಿ ಅವರ ಹೆಸರು ವಿವರ ತೆಗೆದುಕೊಳ್ಳಲಾಗಲಿಲ್ಲ.. ದಯವಿಟ್ಟು ಈ ಪೋಸ್ಟ್ ನೋಡಿದ ಕೂಡಲೇ ನೀವು ಈ ಫೋಟೋವನ್ನ ನಿಮ್ಮ Instagram account ನಲ್ಲಿ ಹಾಕಿ ನನ್ನನ್ನ tag ಮಾಡಿ. ನಾನು Repost ಮಾಡುತ್ತೆನೆ ಜೊತೆಗೆ ನಿಮ್ಮ ಹೆಸರು ತಿಳಿದುಕೊಳ್ಳಬೇಕೆಂಬ ಆಸಕ್ತಿ ನನಗಿದೆ..ಎಂದು ಭಾವುಕರಾಗಿ ಬರೆದುಕೊಂಡಿರುವ ನಟಿ ರಚಿತಾ ರಾಮ್ ಪೋಸ್ಟ್ ಮಾಡಿದ್ದಾರೆ..ಸ್ನೇಹಿತರೆ ನಿಮಗೆ ಆ ಆಟೋ ಹುಡುಗ ಸಿಕ್ಕಲ್ಲಿ ರಚಿತಾ ರಾಮ್ ರವರಿಗೆ ಟ್ಯಾಗ್ ಮಾಡಿ ಅವರಿಗೆ ಸಹಾಯ ಮಾಡಿ..