ರಕ್ಷಿತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದ ಕೋರ್ಟ್?ಸಂಕಷ್ಟದಲ್ಲಿ ಶ್ರೀಮನ್ನಾರಾಯಣ..

Cinema

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ವುಡ್ ನಲ್ಲಿ ದೊಡ್ಡ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ನಟ ನಿರ್ದೇಶಕ ರಕ್ಷಿತ್ ಶೆಟ್ಟಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದಲ್ಲಿ ಅನುಮತಿಯಿಲ್ಲದೆ ಲಹರಿ ಸಂಸ್ಥೆಯ ಆಡಿಯೋವೊಂದನ್ನ ಬಳಸಿಕೊಳ್ಳಲಾಗಿದ್ದು, ನ್ಯಾಯಾಲಯವು ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದೆ.

ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಟಿಸಿದ್ದ ಕಿರಿಕ್ ಪಾರ್ಟಿ ಚಿತ್ರದ ಹಾಡೊಂದರಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯಿಸಿದ್ದ ಶಾಂತಿ ಕ್ರಾಂತಿ ಚಿತ್ರದ ಮಧ್ಯ ರಾತ್ರಿಲಿ, ಹೈವೇ ರಸ್ತೆಲಿ ಹಾಡಿನ ಮ್ಯೂಸಿಕ್ ಟ್ರ್ಯಾಕ್ ‘ಹೂ ಆರ್ ಯು’ ಬಳಸಿಕೊಂಡಿದ್ದರು.

ಇನ್ನು ಈ ಹಾಡಿನ ಹಕ್ಕುಗಳನ್ನು ಲಹರಿ ಆಡಿಯೋ ಸಂಸ್ಥೆ ಹೊಂದಿದ್ದು, ನಟ ನಿರ್ದೇಶಕ ರಕ್ಷಿತಾ ಶೆಟ್ಟಿ ಒಡೆತನದಲ್ಲಿರುವ ಪರಮ್ವಹ ಸ್ಟುಡಿಯೋಸ್ ವಿರುದ್ಧ ಲಹರಿ ಸಂಸ್ಥೆಯ ಮುಖ್ಯಸ್ಥರಾಗಿರುವ ಲಹರಿ ವೇಲು ಪ್ರಕರಣ ದಾಖಲಿಸಿದ್ದು ಕೋರ್ಟ್ ಮೆಟ್ಟಿಲೇರಿದ್ದರು.

ಇನ್ನು ಜನವರಿ ೧೭ರಂದೇ ರಕ್ಷಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಪದೇ ಪದೇ ಗೈರಾದ ಕರಣ ಕೋರ್ಟ್ ನಟ ರಕ್ಷಿತ್ ಶೆಟ್ಟಿ ಮತ್ತು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಒಂದು ವೇಳೆ ರಕ್ಷಿತ್ ಶೆಟ್ಟಿ ಮತ್ತು ಅಜನೀಶ್ ಕೋರ್ಟ್ ನ ವಿಚಾರಣೆಗೆ ಹಾಜರಾಗದಿದ್ದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಲಿದ್ದಾರೆ.