ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ದಕ್ಷ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್‌.?

Advertisements

ಕೆಲವು ತಿಂಗಳ ಹಿಂದಷ್ಟೇ ಖಡಕ್ ಅಧಿಕಾರಿ ಡಿಸಿಪಿ ಅಣ್ಣಾಮಲೈ ಅವರು ತಮ್ಮ ಉದ್ದೆಯನ್ನ ತ್ಯಜಿಸಿದಾಗ, ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಅವರು ರಾಜಕೀಯಕ್ಕೆ ಬಾರದೆಯೇ ಸಾಮಾಜಿಕ ಸೇವೆ ಮಾಡುವೆ ಎಂದು ಹೇಳಿದ್ದರು. ಈಗ ಕರುನಾಡ ಸಿಂಗಂ ಅಣ್ಣಾಮಲೈ ಬಳಿಕ ಮತ್ತೊಬ್ಬ ದಕ್ಷ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

Advertisements

ಹೌದು, ಅವರು ಮತ್ಯಾರು ಅಲ್ಲ, ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿರುವ ದಕ್ಷ ಅಧಿಕಾರಿ ರವಿ. ಡಿ. ಚನ್ನಣ್ಣನವರ್‌. ಖಡಕ್ ಐಪಿಎಸ್ ಅಧಿಕಾರಿಯಾಗಿರುವ ಇವರು ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ಬಡತನದಲ್ಲಿಯೇ ಓದಿ ಬೆಳೆದು ಐಪಿಎಸ್ ಉದ್ದೆಗೆ ಏರಿರುವ ರವಿ. ಡಿ. ಚನ್ನಣ್ಣನವರ್‌ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಕಾರ್ಯನಿರ್ವಹಿಸುತ್ತಿರುವ ರವಿ. ಡಿ. ಚನ್ನಣ್ಣನವರ್‌ ಅವರ ಕಾರ್ಯ ವ್ಯಾಪ್ತಿಗೆ ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಸೇರಿದಂತೆ ನಾಲ್ಕು ತಾಲ್ಲೂಕುಗಳು ಬರುತ್ತವೆ.ಇನ್ನು ದೊಡ್ಡ್ದಬಳ್ಳಾಪುರದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿರುವ ರವಿ ಸರ್, ಅನೇಕ ಸಾಮಾಜಿಕ ಕೆಲಸಗಳಲ್ಲಿ ನಿರತರಾಗಿದ್ದು ಇಂದಿನ ಯುವಜನಾಂಗಕ್ಕೆ ಸ್ಫೂರ್ತಿಯಾಗಿದ್ದಾರೆ. ಹಾಗಾಗಿ ದೊಡ್ಡಬಳ್ಳಾಪುರ ತಾಲ್ಲೂಕನ್ನೇ ಮನಸ್ಸಿನಲ್ಲಿಟ್ಟುಕೊಂಡು ರಾಜಕೀಯಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಪೊಲೀಸ್ ಇಲಾಖೆಯ ವತಿಯಿಂದಲೂ ಸಾಮಾಜಿಕ ಕೆಲಸಗಳಲ್ಲಿ ನಿರತರಾಗಿರುವ ಡಿ ಚನ್ನಣ್ಣನವರ್‌, ಟ್ರಸ್ಟ್ ವೊಂದನ್ನ ಸ್ಥಾಪನೆ ಮಾಡಿದ್ದು, ದೊಡ್ಡಬಳ್ಳಾಪುರ ಸೇರಿದಂತೆ ನೆಲಮಂಗಲ ವ್ಯಾಪ್ತಿಯಲ್ಲಿ ಸಾಮಾಜಿಕ ಕಾಳಜಿಯುಳ್ಳ ಕೆಲಸಗಳಲ್ಲಿ ತೊಡಗಿದ್ದಾರೆ. ಇನ್ನು ಈ ಎಲ್ಲಾ ಕಾರಣಗಳಿಂದ ರಾಜಕೀಯಕ್ಕೆ ರವಿ ಡಿ ಚನ್ನಣ್ಣನವರ್ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿ ಕೋಡಾಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದು ನಿಜವೋ ಸುಳ್ಳೋ ಎಂಬುದನ್ನ ತಿಳಿಯಲು ಕಾದು ನೋಡಬೇಕಾಗಿದೆ.