ದಿನದಿಂದ ದಿನಕ್ಕೆ ಹರಡುತ್ತಿದೆ ಹೆಮ್ಮಾರಿಯಾಗಿ ಕೊರೊನಾ. ಈ ಸೋಂಕನ್ನ ತಡೆಗಟ್ಟುವುದು ಸವಾಲಾಗಿ ಪರಿಣಮಿಸಿದೆ ಸರ್ಕಾರಗಳಿಗೆ. ಇನ್ನು ಜನಪ್ರತಿನಿಧಿಗಳನ್ನು ಬಿಟ್ಟಿಲ್ಲ ಈ ಕೊರೋನಾ. ಹೌದು ಮಂಡ್ಯ ಲೋಕ ಸಭಾ ಕ್ಷೇತ್ರದ ಸಂಸದೆಯಾಗಿರುವ ಸುಮಲಾತ ಅಂಬರೀಷ್ ರವರು ಕೂಡ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಇನ್ನು ಈ ವಿಚಾರವನ್ನ ಸ್ವತಃ ಸುಮಲತಾರವರೇ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದು ನನಗೆ ಕೊರೋನಾ ಸೋಂಕು ತಗಲಿದ್ದು ಇಂದು ಪಾಸಿಟೀವ್ ಬಂದಿದೆ ಎಂದು ಬರೆದುಕೊಂಡಿದ್ದಾರೆ. ಇನ್ನು ಸುಮಲತಾರವರು ತಮ್ಮ ಟ್ವಿಟ್ಟರ್ ಹಾಗೂ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವದೇನಂತ ನೋಡೋಣ ಬನ್ನಿ..
ಆತ್ಮೀಯರೆ,
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 6, 2020
ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. (1/n)
ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.
ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ. ಎಂದು ಸುಮಲತಾರವರು ಬರೆದುಕೊಂಡಿದ್ದಾರೆ.
ಇನ್ನು ಅಭಿಮಾನಿಗಳು ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ನಿಮ್ಮ ಮೇಲೆ ಇದೆ ಹಾಗೂ ನಮ್ಮ ಅಂಬಿ ಮಾಮನ ಆಶೀರ್ವಾದವೂ ಇದೆ, ನಿಮ್ಮ ಸೇವೆ ರಾಜ್ಯಕ್ಕೆ ತುಂಬಾ ಅವಶ್ಯಕತೆ ಇದೆ, ಬೇಗ ಗುಣ ಮುಖರಾಗಿ ಎಂದಿನಂತೆ ತಮ್ಮ ಸಾರ್ವಜನಿಕ ಸೇವೆಗೆ ಬರಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದು ಕಾಮೆಂಟ್ ಗಳನ್ನ ಮಾಡಿದ್ದಾರೆ