ಶಾಕಿಂಗ್ ನ್ಯೂಸ್ : ಸರ್ಜಾ ಕುಟುಂಬಕ್ಕೆ ಮತ್ತೊಂದು ಆಘಾತ ! ಇಬ್ಬರಿಗೂ ಕೊರೋನಾ ಪಾಸಿಟಿವ್

Advertisements

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೋನಾ ಸೋಂಕು ಈಗ ಸೆಲೆಬ್ರೆಟಿಗಳಬೆನ್ನತ್ತಿದೆ. ಈಗಾಗಲೇ ನಟ ಚಿರು ಸರ್ಜಾ ಅವರನ್ನ ಕಳೆದುಕೊಂಡ ನೋವು ಇನ್ನು ಆರಿಯೇ ಇಲ್ಲ..ಹೀಗಿರುವಾಗಲೇ ಸರ್ಜಾ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಹೌದು ಸ್ಯಾಂಡಲ್ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಅವರ ಪತ್ನಿಗೆ ಕೊರೋನಾ ಪಾಸಿಟಿವ್ ಆಗಿದೆ.

Advertisements

ಇನ್ನು ಇದರ ಬಗ್ಗೆ ಸ್ವತಃ ನಟ ಧ್ರುವ ಸರ್ಜಾ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬಹಿರಂಗ ಮಾಡಿದ್ದು ನಮ್ಮ ಸಂಪರ್ಕಕ್ಕೆ ಬಂದಿರುವವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ. ಇನ್ನು ನನ್ನ ಜೊತೆಗೆ ನನ್ನ ಪತ್ನಿ ಪ್ರೇರಣಾಗೂ ಕೊರೋನಾ ಪಾಸಿಟಿವ್ ಇರುವುದು ಧೃಡಪಟ್ಟಿದೆ ಎಂದು ಧ್ರುವ ಸರ್ಜಾ ಹೇಳಿದ್ದು ಸರ್ಜಾ ಕುಟುಂಬಕ್ಕೆ ಮತ್ತೊಂದು ಆತಂಕ ಎದುರಾಗಿದೆ.

ಇನ್ನು ಧ್ರುವ ಸರ್ಜಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಹಾಗೆ ನಾನು ನನ್ನ ಪತ್ನಿ ಕೊರೋನಾ ಟೆಸ್ಟ್ ಮಾಡಿಸಿದ್ದು ಇಬ್ಬರಿಗೂ ಕೊರೋನಾ ಪಾಸಿಟಿವ್ ಇರುವುದು ಧೃಡಪಟ್ಟಿದೆ. ಇನ್ನು ನಮ್ಮಿಬ್ಬರಲ್ಲಿಯೂ ಸಣ್ಣ ಪ್ರಮಾಣದಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದೇವೆ ಎಂದು ಸಾಮಾಜಿಕಾ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

ನಾವು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮರಳಲಿದ್ದೇವೆ ಎಂಬ ನಂಬಿಕೆ ನಮ್ಮಲ್ಲಿದೆ..ಇನ್ನು ಇದೆ ವೇಳೆ ನಮ್ಮ ಸಂಪರ್ಕಕ್ಕೆ ಯಾರೆಲ್ಲಾ ಬಂದಿದ್ದೀರೋ ಅವರೆಲ್ಲಾ ದಯವಿಟ್ಟು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ..ಸೇಫ್ ಆಗಿರಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇನ್ನು ಧ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾರವರಿಗೆ ಯಾರಿಂದ ಕೊರೋನಾ ಬಂದಿದೆ ಎಂದು ತಿಳಿದುಬಂದಿಲ್ಲ..ಇನ್ನು ಅಣ್ಣ ಚಿರು ಸರ್ಜಾ ಸಾವನಪ್ಪಿದ ಹಿನ್ನಲೆಯಲ್ಲಿ ಇತ್ತೀಚೆಗಷ್ಟೇ ಧ್ರುವ ಮತ್ತು ಅವರ ಕುಟುಂಬದವರು ಅನೇಕ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಲಾಗಿದ್ದು ಅವರ ಸ್ನೇಹಿತರು ಕುಟುಂಬವರ್ಗದವರು ಅವರ ಸಂಪರ್ಕಕ್ಕೆ ಬಂದಿರುವ ಕಾರಣ ಅವರೆಲ್ಲಾ ಕ್ವಾರಂಟೈನ್ ಆಗಲೇಬೇಕಿದೆ.

ಇನ್ನು ಧ್ರುವ ಸರ್ಜಾ ಅವರು ನನಗೆ ನನ್ನ ಪತ್ನಿಗೆ ಕೊರೋನಾ ಪಾಸಿಟಿವ್ ಆಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಮಾಡಿದ ಮೇಲೆ ಅವರ ಲಕ್ಷಾಂತರ ಅಭಿಮಾನಿಗಳು ಬೇಗ ಹುಷಾರಾಗಿ ಬನ್ನಿ ಎಂದು ಟ್ವೀಟ್ ಗಳ ಮೇಲೆ ಟ್ವೀಟ್ ಗಳನ್ನ ಮಾಡಿ ಆದಷ್ಟು ಬೇಗ ಹುಷಾರಾಗಿ ಬನ್ನಿ ಎಂದು ಶುಭಕೋರುತ್ತಿದ್ದಾರೆ.