ಶಾಕಿಂಗ್ ಸುದ್ದಿ ! ಗಂಭೀರ ಸ್ಥಿತಿಯಲ್ಲಿ SP ಬಾಲಸುಬ್ರಹ್ಮಣ್ಯಂ

Cinema

ಭಾರತದ ಸುಪ್ರಸಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಬಾಲಸುಬ್ರಮಣ್ಯಂ ಅವರಿಗೆ ಕೊ’ರೋನಾ ಪಾಸಿಟಿವ್ ಉಂಟಾದ ಕಾರಣ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನು ಈಗ ಬಾಲಸುಬ್ರಮಣ್ಯಂ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.

ಇನ್ನು ಕಳೆದ ಎರಡು ಮೂರೂ ದಿನಗಳಿಂದ ಬಾಲಸುಬ್ರಮಣ್ಯಂ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದ ಕಾರಣ ಶೀತ ಹಾಗೂ ಜ್ವರ ಇದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಚೆಕ್ ಮಾಡಿದಾಗ ಅವರಿಗೆ ಸೋಂಕು ಪಾಸಿಟಿವ್ ಇರುವುದು ಗೊತ್ತಾಗಿದೆ. ಇನ್ನು ಇದೆ ಸಮಯದಲ್ಲಿ ನನಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ಸ್ವತಃ ಬಾಲಸುಬ್ರಹ್ಮಣ್ಯಂ ಅವರೇ ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು.

ಇನ್ನು ಈಗ SPB ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನ ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂದು ಆಸ್ಪತ್ರೆಯ ಹೆಲ್ತ್ ಬುಲೆಟಿನ್ ತಿಳಿಸಿದೆ. ೭೪ ವರ್ಷದ ಖ್ಯಾತ ಬಹುಭಾಷಾ ಗಾಯಕರಾಗಿರುವ SP ಬಾಲಸುಬ್ರಹ್ಮಣ್ಯಂ ಅವರು ಬಹುಬೇಗ ಗುಣಮುಖರಾಗಿ ಬರಲೆಂದು ಚಿತ್ರರಂಗದವರು ಸೇರಿದಂತೆ ಎಲ್ಲರೂ ಪ್ರಾರ್ಥನೆ ಮಾಡುತ್ತಿದ್ದಾರೆ. ಚೌಡೇಶ್ವರಿ ಜ್ಯೋತಿಷ್ಯಾಲಯ ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್ ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಸಂಪರ್ಕಿಸಿ ದುರ್ಗಾ ಪ್ರಸಾದ್ ಗುರೂಜಿ 9663034244