ಬಿಗ್ ಬ್ರೇಕಿಂಗ್: ಕಾಲೇಜು ವಿದ್ಯಾರ್ಥಿಗಳಿಗೆ ನೋ ಎಕ್ಸಾಂ ! ಪರೀಕ್ಷೆ ಇಲ್ಲದೆಯೇ ಎಲ್ಲರೂ ಪಾಸ್ ಪಾಸ್

News
Advertisements

ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಇಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪರೀಕ್ಷೆಗಳು ನಡೆಯಬೇಕಿದ್ದ ಈ ವೇಳೆ ವಿದ್ಯಾರ್ಥಿಗಳಿಗೆ ಕೊರೋನಾ ಹರಡುವ ಭೀತಿ ಇರುವ ಕಾರಣ ೨೦೧೯-೨೦ನೇ ಸಾಲಿನ ಇಂಜಿನಿಯರಿಂಗ್ ಸೇರಿದಂತೆ ಇತರ ಪದವಿಗಳು ಡಿಪ್ಲೋಮ, ಸ್ನಾತಕೋತ್ತರ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆಯೇ ಉತ್ತೀರ್ಣ ಮಾಡುವ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ರಾಜ್ಯ ಸರ್ಕಾರ.

Advertisements

ವಿದ್ಯಾರ್ಥಿಗಳ ಇಂಟರ್ನಲ್ ಅಂಕಗಳ ಆಧಾರದ ಮೇಲೆ ಅವರನ್ನ ಪಾಸ್ ಮಾಡಿ ಮುಂದಕ್ಕೆ ಕಳುಹಿಸಲು ಸರ್ಕಾರ ಸೂಚನೆ ನೀಡಿದೆ ಎಂದು ಹೇಳಲಾಗಿದೆ. ಆದ್ರೆ ಫೈನಲ್ ಇಯರ್ ಡಿಗ್ರಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುತ್ತದೆ. ಇನ್ನು ಫೈನಲ್ ಇಯರ್ PG ಓದುತ್ತಿರುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ತಿಂಗಳಲಿನ ಅಂತ್ಯದಲ್ಲಿ ಆನ್ಲೈನ್ ಮೂಲಕ ಪರೀಕ್ಷೆ ನಡೆಯುತ್ತದೆ ಎಂದು ಉನ್ನತ ಶಿಕ್ಷಣ ಸಚಿರಾಗಿರುವ ಅಶ್ವಥ್ ನಾರಾಯಣರವರು ಅಧಿಕೃತವಾಗಿ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು UGC ಮಾರ್ಗಸೂಚಿಯನ್ನು ಹೊರತಂದಿತ್ತು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಒಳಿತನ್ನು ಗಮನದಲ್ಲಿರಿಸಿಕೊಳ್ಳುವುದರ ಜೊತೆಗೆ, ಉನ್ನತ ಶಿಕ್ಷಣ ಇಲಾಖೆಯು ಈ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಂಡು ಒಂದು ತೀರ್ಮಾನಕ್ಕೆ ಬಂದಿದೆ.ಎಲ್ಲಾ ಕೋರ್ಸ್ ಗಳ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಸಮಗ್ರ ಮೌಲ್ಯಮಾಪನದ (Comprehensive Evaluation) ಮಾನದಂಡದ ಮೇಲೆ ತೇರ್ಗಡೆ ಮಾಡಲಾಗುವುದು.

ಆಂತರಿಕ ಅಂಕಗಳು ಮತ್ತು (ಅನ್ವಯವಾಗುವಲ್ಲಿ) ಹಿಂದಿನ ಸೆಮಿಸ್ಟರ್’ನ ಅಂಕಗಳ 50:50 ರೀತಿಯ Comprehensive Evaluation ಆಧಾರದ ಮೇಲೆ ತೇರ್ಗಡೆ ಮಾಡಲಾಗುವುದು.ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆಂಬ ಇಚ್ಛೆ ಇದ್ದಲ್ಲಿ, ಅವರುಗಳಿಗೆ ಮುಂದಿನ ಸೆಮಿಸ್ಟರ್’ನಲ್ಲಿ ಪ್ರತ್ಯೇಕ ಪರೀಕ್ಷೆಗಳನ್ನು ನಡೆಸಲಾಗುವುದು.ವಿದ್ಯಾರ್ಥಿಗಳಿಗೆ backlog ಇದ್ದರೆ ಆ subject ಗಳನ್ನು Carry Forward ಮಾಡಲಾಗುವುದು ಮತ್ತು ಮುಂದಿನ ಸೆಮಿಸ್ಟರ್’ನಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.

Backlog ಗಳ ಸಹಿತ ಅಂತಿಮ ಸೆಮಿಸ್ಟರ್/ವರ್ಷದ ವಿದ್ಯಾರ್ಥಿಗಳಿಗೆ ಇದೇ ಸೆಪ್ಟೆಂಬರ್ ಅಂತ್ಯದ ಒಳಗಾಗಿ ಪರೀಕ್ಷೆಗಳನ್ನು ನಡೆಸಲಾಗುವುದು.ಸಂಬಂಧಪಟ್ಟ ವಿಶ್ವವಿದ್ಯಾಲಯಗಳು ಪರೀಕ್ಷಾ ವೇಳಾಪಟ್ಟಿಯನ್ನು ಮತ್ತು ಇತರ ಮಾಹಿತಿಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಿವೆ.ಯಾವುದೇ ಅನುಮಾನಗಳಿದ್ದಲ್ಲಿ 080-22341394 ಅನ್ನು ಸಂಪರ್ಕಿಸಿ.